alex Certify ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ; ಕೋಕಾ ಕಾಯ್ದೆಯಡಿ ಆರೋಪಿ ವಿರುದ್ಧದ ಕೇಸ್ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ; ಕೋಕಾ ಕಾಯ್ದೆಯಡಿ ಆರೋಪಿ ವಿರುದ್ಧದ ಕೇಸ್ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಕಾ ಕಾಯ್ದೆಯಡಿ ಆರೋಪಿ ಮೋಹನ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.

2017ರಲ್ಲಿ ನಡೆದಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಕೇಸ್ ನಲ್ಲಿ ಕೋಕಾ ಕಾಯ್ದೆಯಡಿ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕೇಸ್ ನ್ನು ಈ ಹಿಂದೆ ಹೈಕೋರ್ಟ್ ರದ್ದು ಮಾಡಿತ್ತು. ಇದೀಗ ಹೈಕೋರ್ಟ್ ಆದೇಶ ರದ್ದು ಪಡಿಸಿರುವ ಸುಪ್ರೀಂ ಕೋರ್ಟ್, ಪ್ರಕರಣ ಎತ್ತಿಹಿಡಿದಿದೆ.

ಖುಷಿ ಸುದ್ದಿ…! ಈ ಬ್ಯಾಂಕ್ ಗ್ರಾಹಕರ ಮನೆಗೆ ಬರಲಿದೆ 20 ಸಾವಿರ ರೂ.

ಹೈಕೋರ್ಟ್ ಆದೇಶ ಪ್ರಶ್ನಿಸಿ ಕವಿತಾ ಲಂಕೇಶ್, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಅದರಂತೆ ಇದೀಗ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶ ರದ್ದು ಮಾಡಿ, ಆರೋಪಿ ಮೋಹನ್ ವಿರುದ್ಧ ದಾಖಲಾಗಿದ್ದ ಕೇಸ್ ಎತ್ತಿಹಿಡಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...