ಪದವೀಧರ ಶಿಕ್ಷಕರ ನೇಮಕಾತಿ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಆರರಿಂದ ಎಂಟನೇ ತರಗತಿಗೆ 15,000 ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದ್ದು, ಈಗಾಗಲೇ ಕಾರ್ಯ ಪ್ರಗತಿಯಲ್ಲಿದೆ.
ಈ ಮೊದಲು 1:2 ಅನುಪಾತದಲ್ಲಿ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ ದಾಖಲಾತಿಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದ್ದು, ಇದೀಗ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದು, ಈ ವಾರದೊಳಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳ ಬಳಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.