alex Certify ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜೆಡಿಎಸ್ ಶಾಸಕರಿಂದ ಮತಯಾಚನೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಜೆಡಿಎಸ್ ಶಾಸಕರಿಂದ ಮತಯಾಚನೆ…!

ದಳದ ಮತ್ತೊಂದು ವಿಕೆಟ್‌ ಪತನ? ಜೆಡಿಎಸ್ ನಲ್ಲಿ ನಿತ್ಯವೂ ಕಿರುಕುಳ, ಹಿಂಸೆ- ಮರಿತಿಬ್ಬೇಗೌಡ-  Kannada Prabhaಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಜೆಡಿಎಸ್ ಕೋಲಾರ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಮತ ಚಲಾಯಿಸಿದ್ದು, ವಿಷಯವನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಇದೀಗ ಮತ್ತೊಬ್ಬ ಶಾಸಕರು ಕೈ ಅಭ್ಯರ್ಥಿ ಪರ ಮತ ಯಾಚಿಸಿರುವ ಘಟನೆ ನಡೆದಿದೆ.

ಸೋಮವಾರ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡರ ಪರ ಬಹಿರಂಗವಾಗಿಯೇ ಮತ ಯಾಚಿಸಿದ್ದಾರೆ. ಶ್ರೀರಂಗಪಟ್ಟಣದ ಮಿನಿ ವಿಧಾನಸೌಧ ಬಳಿ ಇರುವ ಮತಗಟ್ಟೆ ಬಳಿ ಮರಿತಿಬ್ಬೇಗೌಡ, ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಇದನ್ನು ಗಮನಿಸಿದ ಜೆಡಿಎಸ್ ಕಾರ್ಯಕರ್ತರು ಮರಿತಿಬ್ಬೇಗೌಡರ ನಿಲುವನ್ನು ಖಂಡಿಸಿದ್ದಾರೆ. ಅಲ್ಲದೆ ದೇವೇಗೌಡರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮರಿತಿಬ್ಬೇಗೌಡ, ನನಗೆ ಆಗಿರುವ ನೋವು ನನಗಷ್ಟೇ ಗೊತ್ತು. ಕಾಲವೇ ಮುಂದೆ ನಿಮಗೆಲ್ಲಾ ಉತ್ತರ ನೀಡುತ್ತದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...