ಹಿಜಾಬ್ ಧಾರಣೆ ಕುರಿತ ಪ್ರಕರಣದಲ್ಲಿ ಹೈಕೋರ್ಟ್, ವಿದ್ಯಾರ್ಥಿಗಳು ಕಡ್ಡಾಯವಾಗಿ ಶಾಲಾ – ಕಾಲೇಜು ಸಮವಸ್ತ್ರ ಧರಿಸಬೇಕೆಂದು ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ಈಗ ಕೆಲವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದರ ವಿಚಾರಣೆ ನಡೆಯಬೇಕಿದೆ.
ಇದರ ಮಧ್ಯೆ ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಆರಂಭವಾಗಿದ್ದು, ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಯೇ ಪರೀಕ್ಷೆಗೆ ಹಾಜರಾಗಬೇಕೆಂದು ಸರ್ಕಾರ ಆದೇಶ ಹೊರಡಿಸಿತ್ತು. ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೂ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ಹಿಜಾಬ್ ತೆಗೆಯಬೇಕೆಂದು ಸೂಚಿಸಲಾಗಿತ್ತು.
ಈ ಸಂದರ್ಭದಲ್ಲಿ ಮೇಲ್ವಿಚಾರಕಿಯೊಬ್ಬರು ಹಿಜಾಬ್ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾಜಿನಗರದ ಕೆ ಟಿ ಎಸ್ ವಿ ಪರೀಕ್ಷಾ ಕೇಂದ್ರಕ್ಕೆ ಮೇಲ್ವಿಚಾರಕಿ ನೂರ್ ಫಾತೀಮಾ ಹಿಜಾಬ್ ಧರಿಸಿ ಬಂದಿದ್ದು, ಬಳಿಕ ಅವರನ್ನು ಪರೀಕ್ಷಾ ಕರ್ತವ್ಯದಿಂದ ಅಮಾನತುಗೊಳಿಸಿ ಮತ್ತೊಬ್ಬ ಮೇಲ್ವಿಚಾರಕರಿಗೆ ಅವಕಾಶ ಮಾಡಿಕೊಡಲಾಗಿದೆ.