alex Certify ಪರೇಶ್ ಮೇಸ್ತಾ ಸಾವಿನ ಕುರಿತ CBI ವರದಿ ಸಲ್ಲಿಕೆ; ಬಿಜೆಪಿಯನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿದ್ದು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರೇಶ್ ಮೇಸ್ತಾ ಸಾವಿನ ಕುರಿತ CBI ವರದಿ ಸಲ್ಲಿಕೆ; ಬಿಜೆಪಿಯನ್ನ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಿದ್ದು..!

ಪರೇಶ್ ಮೆಸ್ತಾ ಸಾವಿನ ಪ್ರಕರಣ ಸಂಬಂಧ ಇದೀಗ ಸಿಬಿಐ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ಇದೊಂದು ಕೊಲೆ ಅಲ್ಲ ಆಕಸ್ಮಿಕ ಸಾವು ಅಂತ ಆ ವರದಿಯಲ್ಲಿ ತಿಳಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಟ್ವೀಟ್ ನ ಮೂಲಕ ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೊನ್ನಾವರದ ಪರೇಶ್ ಮೇಸ್ತನದ್ದು ಹತ್ಯೆ ಅಲ್ಲ, ಆಕಸ್ಮಿಕ ಸಾವು ಎಂಬ ಸಿಬಿಐನ ವಿಚಾರಣಾ ವರದಿ ರಾಜ್ಯ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ. ಬಿಜೆಪಿಗೆ ಮಾನ-ಮರ್ಯಾದೆ ಇದ್ದರೆ ನಮ್ಮ ಮೇಲೆ ಮಾಡಿದ್ದ ಸುಳ್ಳು ಆರೋಪಕ್ಕಾಗಿ ಕ್ಷಮೆ ಕೋರಬೇಕು ಎಂದು ಒಂದು ಟ್ವೀಟ್ ಮಾಡಿದ್ದರೆ, ಮತ್ತೊಂದು ಟ್ವೀಟ್ ನಲ್ಲಿ ಬಿಜೆಪಿ ಗೆದ್ದಿರುವ ಪ್ರತಿಯೊಂದು ಸ್ಥಾನದ ಹಿಂದೆ ಪರೇಶ್ ಮೇಸ್ತನಂತಹ ಅಮಾಯಕ ಯುವಕರ ರಕ್ತ ಇದೆ. ಬಿಜೆಪಿ ನಾಯಕರೇ, ನೀವು ಅನುಭವಿಸುತ್ತಿರುವ ಅಧಿಕಾರದ ಕುರ್ಚಿಗೆ ಮೇಸ್ತಾನಂತಹ ಯುವಕರ ರಕ್ತದ ಕಲೆ ಅಂಟಿಕೊಂಡಿದೆ ಎಂದಿದ್ದಾರೆ.

ಉತ್ತರ ಕನ್ನಡದ ಹೊನ್ನಾವರದಲ್ಲಿ 2017ರಲ್ಲಿ ನಡೆದ ಗಲಭೆಯಲ್ಲಿ ಮೀನುಗಾರ ಯುವಕ ಪರೇಶ್ ಮೇಸ್ತಾ ಕಾಣೆಯಾಗಿದ್ದ. ನಂತರ ಡಿಸೆಂಬರ್ 8ರಂದು ಹೊನ್ನಾವರದ ಶನಿ ದೇವಸ್ಥಾನದ ಹಿಂಭಾಗದ ಶೆಟ್ಟಿ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದನು. ಪರೇಶ್ ಅವರನ್ನು ಅನ್ಯ ಕೋಮಿನವರೇ ಕೊಲೆ ಮಾಡಿದ್ದಾರೆ ಎಂಬ ಕೂಗು ಹೆಚ್ಚಾಗಿತ್ತು. ಇದನ್ನು ಸಿಬಿಐಗೂ ವಹಿಸಲಾಗಿತ್ತು. ಇದೀಗ ವರದಿಯನ್ನು ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...