alex Certify ‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್ ಅಭಿನಯದ ‘ಗಂಧದಗುಡಿ’ ಸಾಕ್ಷ್ಯ ಚಿತ್ರ ಅಕ್ಟೋಬರ್ 28 ಕ್ಕೆ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪವರ್ ಸ್ಟಾರ್’ ಪುನೀತ್ ರಾಜಕುಮಾರ್ ಅಭಿನಯದ ‘ಗಂಧದಗುಡಿ’ ಸಾಕ್ಷ್ಯ ಚಿತ್ರ ಅಕ್ಟೋಬರ್ 28 ಕ್ಕೆ ರಿಲೀಸ್

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ವಿಧಿವಶರಾಗಿ ಹಲವು ತಿಂಗಳುಗಳೇ ಕಳೆದರೂ ಸಹ ಜನರ ಮನದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದ್ದಾರೆ. 2021ರ ಅಕ್ಟೋಬರ್ 29ರಂದು ಅವರು ನಿಧನರಾಗಿದ್ದು, 2022ರ ಅಕ್ಟೋಬರ್ 28ರಂದು ಅವರ ಅಭಿನಯದ ‘ಗಂಧದಗುಡಿ’ ಸಾಕ್ಷ್ಯ ಚಿತ್ರ ಬಿಡುಗಡೆಯಾಗಲಿದೆ.

ಗಣಪತಿ ಹಬ್ಬದ ದಿನದಂದು ‘ಗಂಧದಗುಡಿ’ ಸಾಕ್ಷ್ಯ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಪುನೀತ್ ಅವರು ಆನೆಯ ಜೊತೆ ನಿಂತಿದ್ದಾರೆ. ಎಲ್ಲರಿಗೂ ಗೌರಿ – ಗಣೇಶ ಹಬ್ಬದ ಶುಭಾಶಯಗಳು ಎಂದು ಚಿತ್ರತಂಡ ಈ ಪೋಸ್ಟರ್ನಲ್ಲಿ ಬರೆದಿದೆ.

‘ಗಂಧದ ಗುಡಿ’ ಸಾಕ್ಷ್ಯ ಚಿತ್ರವನ್ನು ಪುನೀತ್ ರಾಜಕುಮಾರ್ ಅವರ PRK ಪ್ರೊಡಕ್ಷನ್ ನಿರ್ಮಾಣ ಮಾಡಿದ್ದು, ಈ ಸಾಕ್ಷ್ಯಚಿತ್ರ ನಿರ್ಮಾಣ ಸಂದರ್ಭದಲ್ಲಿ ಪುನೀತ್ ಅವರು ನಿಧನರಾಗಿದ್ದರು. ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿರುವುದು ವಿಶೇಷ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...