alex Certify ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ರಣವಿಕ್ರಮ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ರಣವಿಕ್ರಮ’ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ

ಪವನ್ ಒಡೆಯರ್ ನಿರ್ದೇಶನದ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಸೂಪರ್ ಹಿಟ್ ಸಿನಿಮಾ ‘ರಣವಿಕ್ರಮ’ 2015 ಏಪ್ರಿಲ್ 10ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು.

ಈ ಚಿತ್ರ ತೆರೆಮೇಲೆ ಬಂದು ಇಂದಿಗೆ 7 ವರ್ಷ ಕಳೆದಿದೆ. ಈ ಚಿತ್ರ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿದ್ದಲ್ಲದೇ ಹಾಡುಗಳ ಮೂಲಕ ಸಾಕಷ್ಟು ಸೌಂಡ್ ಮಾಡಿತ್ತು.

ಜಯಣ್ಣ ಕಂಬೈನ್ಸ್ ಹಾಗೂ ರಿಲಯನ್ಸ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ಜಯಣ್ಣ-ಭೋಗೇಂದ್ರ ಈ ಸಿನಿಮಾ ನಿರ್ಮಾಣ ಮಾಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಅಂಜಲಿ, ಆದಾ ಶರ್ಮಾ ಹಾಗೂ ಗಿರೀಶ್ ಕಾರ್ನಾಡ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು.

ಆ್ಯಕ್ಷನ್ ಥ್ರಿಲ್ಲರ್ ಆಧಾರಿತ ಈ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ನೀಡಿದ್ದರು. ಇಂದು ಸೋಷಿಯಲ್ ಮೀಡಿಯಾದಲ್ಲಿ ಪುನೀತ್ ಅಭಿಮಾನಿಗಳು ಈ ಚಿತ್ರದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...