ರಾಷ್ಟ್ರದ ವಿವಿಧ ರಾಜ್ಯಗಳಲ್ಲಿರುವ ವಿಶ್ವವಿದ್ಯಾಲಯಗಳಿಗೆ ಬಹುತೇಕ ಆಯಾ ರಾಜ್ಯಗಳ ರಾಜ್ಯಪಾಲರೇ ಕುಲಾಧಿಪತಿಗಳಾಗಿರುತ್ತಾರೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಈ ಕುರಿತಂತೆ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳೇ ಕುಲಾಧಿಪತಿಗಳಾಗಿರುತ್ತಾರೆ.
ಸೋಮವಾರದಂದು ಪಶ್ಚಿಮಬಂಗಾಳ ವಿಧಾನಸಭೆಯಲ್ಲಿ ವಿಶ್ವವಿದ್ಯಾಲಯ ಕಾನೂನುಗಳ (ತಿದ್ದುಪಡಿ) ವಿಧೇಯಕ 2022 ನ್ನು ಮಂಡಿಸಿ ಅನುಮೋದನೆ ಪಡೆಯಲಾಗಿದ್ದು, ಇದರ ಪರವಾಗಿ 182 ಸದಸ್ಯರು ಹಾಗೂ ವಿರೋಧಿಸಿ 40 ಸದಸ್ಯರು ಮತ ಚಲಾಯಿಸಿದ್ದಾರೆ.
ಪ್ರತಿಪಕ್ಷ ಬಿಜೆಪಿ ಈ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ರಾಜ್ಯಪಾಲರೇ ಕುಲಾಧಿಪತಿ ಹುದ್ದೆಯಲ್ಲಿ ಮುಂದುವರೆಯಲಿ ಎಂದು ಆಗ್ರಹಿಸಿತ್ತು. ಮುಖ್ಯಮಂತ್ರಿಗಳು ಕುಲಾಧಿಪತಿಯಾಗಿ ಆಯ್ಕೆಯಾಗುವುದರಿಂದ ಶಿಕ್ಷಣ ವ್ಯವಸ್ಥೆಯಲ್ಲಿ ರಾಜಕೀಯ ಪ್ರವೇಶಿಸುತ್ತದೆ ಎಂಬುದು ಬಿಜೆಪಿ ನಿಲುವಾಗಿದೆ.