alex Certify ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾಕ್ಕೆ ರೋಚಕ ಗೆಲುವು, ದೇಶದಾದ್ಯಂತ ಮುಗಿಲು ಮುಟ್ಟಿತ್ತು ಅಭಿಮಾನಿಗಳ ಸಂಭ್ರಮ… | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾಕ್ಕೆ ರೋಚಕ ಗೆಲುವು, ದೇಶದಾದ್ಯಂತ ಮುಗಿಲು ಮುಟ್ಟಿತ್ತು ಅಭಿಮಾನಿಗಳ ಸಂಭ್ರಮ…

ಏಷ್ಯಾ ಕಪ್‌ನ ಬಹು ನಿರೀಕ್ಷಿತ ಪಂದ್ಯದಲ್ಲಿ ಭಾರತ, ಪಾಕಿಸ್ತಾನವನ್ನು ಮಣಿಸಿದೆ. ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್‌ ಪಂದ್ಯ ಕ್ರಿಕೆಟ್‌ ಪ್ರೇಮಿಗಳನ್ನು ತುದಿಗಾಲಲ್ಲಿ ನಿಲ್ಲಿಸಿತ್ತು. ರೋಚಕ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ 5 ವಿಕೆಟ್‌ಗಳಿಂದ ಬಗ್ಗು ಬಡಿದಿದೆ.

ರವೀಂದ್ರ ಜಡೇಜಾ ಮತ್ತು ಹಾರ್ದಿಕ್ ಪಾಂಡ್ಯ ನಡುವಿನ ಜೊತೆಯಾಟ ಭಾರತಕ್ಕೆ ಗೆಲುವು ತಂದುಕೊಟ್ಟಿತು. ಟೀಂ ಇಂಡಿಯಾ ಗೆಲುವಿನ ಕೇಕೆ ಹಾಕ್ತಿದ್ದಂತೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಭಾರತದ ಬಹುತೇಕ ಕಡೆಗಳಲ್ಲಿ ಪಟಾಕಿ ಸಿಡಿಸಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ವಾಣಿಜ್ಯ ನಗರಿ ಮುಂಬೈನಲ್ಲಂತೂ ಸಂಭ್ರಮಾಚರಣೆ ಜೋರಾಗಿತ್ತು.

ಉತ್ತರ ಪ್ರದೇಶದ ಮುರಾದಾಬಾದ್‌ನಲ್ಲಿ ಜಮಾಯಿಸಿದ ಅಭಿಮಾನಿಗಳು ಪಟಾಕಿ ಸಿಡಿಸಿದ್ರು. ಕೈಯಲ್ಲಿ ತಿರಂಗಾ ಹಿಡಿದು ದೇಶಪ್ರೇಮ ಪ್ರದರ್ಶಿಸಿದ್ರು.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕೂಡ ಸಂಭ್ರಮಾಚರಣೆ ಜೋರಾಗಿತ್ತು. ಟೀಂ ಇಂಡಿಯಾದ ಗೆಲುವಿನಿಂದ ಅಭಿಮಾನಿಗಳ ಸಂತಸ ಮುಗಿಲುಮುಟ್ಟಿತ್ತು.

ಬೆಂಗಳೂರು, ಪಶ್ಚಿಮ ಬಂಗಾಳದ ಸಿಲಿಗುರಿ, ಮಹಾರಾಷ್ಟ್ರದ ನಾಗ್ಪುರ ಸೇರಿದಂತೆ ದೇಶದಾದ್ಯಂತ ಭಾರತದ ಗೆಲುವನ್ನು ಆಚರಿಸಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...