alex Certify ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು; ಮುಗಿಲು ಮುಟ್ಟಿದ ವಿದ್ಯಾರ್ಥಿಗಳ ಆಕ್ರಂದನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು; ಮುಗಿಲು ಮುಟ್ಟಿದ ವಿದ್ಯಾರ್ಥಿಗಳ ಆಕ್ರಂದನ

ಮಂಡ್ಯ: ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಎಲೆಚಾಕನಹಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಸರ್ಕಾರಿ ಶಾಲೆಯಲ್ಲಿನ ಶಿಕ್ಷಕ ರಾಜೇಶ್(47) ಎಂಬುವವರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಶಿಕ್ಷಕರು.

ಶಿಕ್ಷಕರಿಗೆ ಹೃದಯಾಘಾತವಾಗುತ್ತಿದ್ದಂತೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಆನಂತರ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಗೂಗಲ್ ಹಾಗೂ ಫೇಸ್ ಬುಕ್ ಗೆ ರಷ್ಯಾ ನ್ಯಾಯಾಲಯದಿಂದ ಭಾರೀ ದಂಡ..!

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕ ಕುಸಿದು ಬಿದ್ದಿದ್ದನ್ನು ಕಂಡ ವಿದ್ಯಾರ್ಥಿಗಳು ಆಘಾತಕ್ಕೊಳಗಾಗಿದ್ದು, ಸಾವಿನ ಸುದ್ದಿ ಕೇಳುತ್ತಿದ್ದಂತೆ ಅವರ ಆಕ್ರಂದನ ಮುಗಿಲು ಮುಟ್ಟಿದೆ. ರಾಜೇಶ್ ಅವರಿಗೆ ಇಬ್ಬರು ಮಕ್ಕಳು ಹಾಗೂ ಪತ್ನಿ ಇದ್ದಾರೆ. ಇಂದು ಅವರ ಅಂತ್ಯ ಸಂಸ್ಕಾರ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯಲ್ಲಿ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...