
ಶಾಲಾ ಶಿಕ್ಷಕರೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.
ದಾವಣಗೆರೆ ತಾಲೂಕಿನ ಮಹಾದೇವಿಪುರ ಗ್ರಾಮದ ವಿಜಯಕುಮಾರ್ ಮೃತಪಟ್ಟ ಶಿಕ್ಷಕರಾಗಿದ್ದು, ಇವರು ಭಾನುವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಸೋಮವಾರ ಬೆಳಿಗ್ಗೆ ಇವರು ವಿದ್ಯಾರ್ಥಿಗಳಿಗೆ ಬೋಧನೆ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದು, ಬಳಿಕ ಅವರನ್ನು ಭಾನುವಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.