ಪಾಠ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಪದೇ ಪದೇ ಮನೆಗೆ ಕರೆಸಿಕೊಳ್ಳುತ್ತಿದ್ದ ಪ್ರಾಧ್ಯಾಪಕನೊಬ್ಬ ಆಕೆ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದು, ಇದೀಗ ಆಕೆ ಗರ್ಭಿಣಿಯಾದ ಬಳಿಕ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಈ ಘಟನೆ ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದ್ದು, ಶಿಗ್ಗಾಂವಿ ತಾಲ್ಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕನಾಗಿರುವ ನಿಂಗಪ್ಪ ಗಂಗಪ್ಪ ಕಲಕೋಟಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯಾಗಿದ್ದಾನೆ.
ಈತ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿಯನ್ನು ಪಾಠ ಹೇಳಿಕೊಡುವ ನೆಪದಲ್ಲಿ ಮನೆಗೆ ಕರೆಸಿಕೊಂಡಿದ್ದು, ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಇದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದು ವಿಷಯ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಇದೀಗ ವಿದ್ಯಾರ್ಥಿನಿಯ ಪೋಷಕರು ಸವಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪರಾರಿಯಾಗಿರುವ ಆರೋಪಿ ಬಂಧನಕ್ಕೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.