alex Certify ಪಾದಚಾರಿಯ ಮೇಲೆ ಹರಿದ ಕಾರು….! ಬೆಚ್ಚಿ ಬೀಳಿಸುತ್ತೆ ಅಪಘಾತದ ದೃಶ್ಯಾವಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾದಚಾರಿಯ ಮೇಲೆ ಹರಿದ ಕಾರು….! ಬೆಚ್ಚಿ ಬೀಳಿಸುತ್ತೆ ಅಪಘಾತದ ದೃಶ್ಯಾವಳಿ

ರಸ್ತೆ ದಾಟುತ್ತಿದ್ದ ಪಾದಚಾರಿಯ ಮೇಲೆ ಕೆಂಪು ಬಣ್ಣದ ಎಸ್​ಯುವಿ ಕಾರು ಹರಿದ ಘಟನೆಯು ದೆಹಲಿಯ ಕನ್ನಾಟ್​ ಪ್ಲೇಸ್​ ರಸ್ತೆಯಲ್ಲಿ ಸಂಭವಿಸಿದೆ. ಈ ಆಘಾತಕಾರಿ ಘಟನೆಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಈ ಘಟನೆ ಸಂಬಂಧ ಈವರೆಗೆ ಯಾವುದೇ ಅಧಿಕೃತ ದೂರುಗಳು ದಾಖಲಾಗಿಲ್ಲ. ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದಾರೆ.

ಐದು ಸೆಕೆಂಡ್​ಗಳ ಸಿಸಿ ಕ್ಯಾಮರಾ ದೃಶ್ಯಾವಳಿ ಇದಾಗಿದ್ದು ವ್ಯಕ್ತಿಯೊಬ್ಬರು ಫುಟ್​ಪಾತ್​ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಹಿಂದಿನಿಂದ ವೇಗವಾಗಿ ಬಂದು ನುಗ್ಗಿದ ಕೆಂಪು ಬಣ್ಣದ ಎಸ್​ಯುವಿ ಪಾದಚಾರಿಯ ಮೇಲೆ ಹರಿದಿದೆ. ಪಾದಚಾರಿಯು ಸತ್ತಿದ್ದಾನೋ ಬದುಕಿದ್ದಾನೋ ಎಂಬುದರ ಬಗ್ಗೆಯೂ ತಲೆಕೆಡಿಸಿಕೊಳ್ಳದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಾಯಾಳುವನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ಮೃತಪಟ್ಟಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...