alex Certify ಪಾದಚಾರಿ ಮಾರ್ಗದಲ್ಲಿ ಬೈಕ್ ಚಲಾಯಿಸ್ತೀರಾ ? ಹಾಗಾದ್ರೆ ಎಚ್ಚರ ದಾಖಲಾಗುತ್ತೆ ಕ್ರಿಮಿನಲ್ ಕೇಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾದಚಾರಿ ಮಾರ್ಗದಲ್ಲಿ ಬೈಕ್ ಚಲಾಯಿಸ್ತೀರಾ ? ಹಾಗಾದ್ರೆ ಎಚ್ಚರ ದಾಖಲಾಗುತ್ತೆ ಕ್ರಿಮಿನಲ್ ಕೇಸ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಇರುವ ಸಂದರ್ಭಗಳಲ್ಲಿ ದ್ವಿಚಕ್ರ ವಾಹನ ಸವಾರರು ಪಾದಚಾರಿ ಮಾರ್ಗದಲ್ಲಿಯೇ ವಾಹನ ಚಲಾಯಿಸುತ್ತಾರೆ. ಇದರಿಂದಾಗಿ ಫುಟ್ಪಾತ್ ಮೇಲೆ ಓಡಾಡುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಇದೀಗ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ಕ್ರಮಕ್ಕೆ ಮುಂದಾಗಿದ್ದಾರೆ.

ಹೌದು, ಪಾದಚಾರಿ ಮಾರ್ಗದಲ್ಲಿ ದ್ವಿಚಕ್ರ ವಾಹನ ಚಲಾಯಿಸುವವರ ವಿರುದ್ಧ ಪ್ರಾಣಕ್ಕೆ ಸಂಚಕಾರ ತರುವ ಕ್ರಿಮಿನಲ್ ಪ್ರಕರಣವನ್ನು ದಾಖಲು ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸ್ ವಿಶೇಷ ಆಯುಕ್ತ ಎಂ.ಎ. ಸಲೀಂ ತಿಳಿಸಿದ್ದಾರೆ. ಅಲ್ಲದೆ ರಸ್ತೆ ನಿಯಮ ಉಲ್ಲಂಘಿಸುವ ಪ್ರಕರಣ ದಾಖಲಿಸುವಲ್ಲಿ ಬೆಂಗಳೂರು ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂಬ ಆಘಾತಕಾರಿ ಮಾಹಿತಿಯನ್ನು ಸಹ ಈ ಸಂದರ್ಭದಲ್ಲಿ ಅವರು ಬಹಿರಂಗಪಡಿಸಿದ್ದಾರೆ.

2022ರ ಜನವರಿಯಿಂದ ಬೆಂಗಳೂರಿನಲ್ಲಿ 96 ಲಕ್ಷ ಪ್ರಕರಣಗಳನ್ನು ದಾಖಲಿಸಲಾಗಿದ್ದು 174 ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಎಂದು ಎಂ.ಎ. ಸಲೀಂ ಅವರು ತಿಳಿಸಿದ್ದು, ನಿತ್ಯದ ಸಂಗ್ರಹಣೆ ಆಧರಿಸಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರಿಗೆ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ಅವರು ಎಲ್ಲೆಂದರಲ್ಲಿ ಬಸ್ ನಿಲ್ಲಿಸುತ್ತಿದ್ದು, ಈ ಭತ್ಯೆಯನ್ನು ನಿಲ್ಲಿಸಿ ನಿಲ್ದಾಣದಲ್ಲಿಯೇ ಬಸ್ ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಬಿಎಂಟಿಸಿಗೆ ಮನವಿ ಮಾಡಲಾಗಿದೆ ಎಂದು ಸಂಚಾರ ಪೊಲೀಸ್ ವಿಶೇಷ ಆಯುಕ್ತರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...