alex Certify ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪ್ರಿಯಾಂಕ್ ಖರ್ಗೆಗೂ ಕೊರೊನಾ ಪಾಸಿಟಿವ್

Stayzilla controversy: Karnataka IT minister says no startups, vendors  above law - Hindustan Timesಬೆಂಗಳೂರು : ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಲವು ಕಾಂಗ್ರೆಸ್ ನಾಯಕರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೂ ಕೋವಿಡ್ ಪಾಸಿಟಿವ್ ಬಂದಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಪ್ರಿಯಾಂಕ್ ಖರ್ಗೆ, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಶಾಸಕರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಐಸೋಲೇಷನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದ ರಾಜ್ಯಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಹಿರಿಯ ನಾಯಕ ವೀರಪ್ಪ ಮೊಯ್ಲಿ, ಹೆಚ್.ಎಂ.ರೇವಣ್ಣ ಸೇರಿದಂತೆ ಹಲವು ನಾಯಕರಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಪ್ರಿಯಾಂಕ್ ಖರ್ಗೆ ಅವರಿಗೂ ಸೋಂಕು ಹರಡಿದ್ದು, ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಇನ್ನಷ್ಟು ಕೈ ನಾಯಕರಿಗೂ ಕೊರೊನಾತಂಕ ಶುರುವಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...