ಮೇಕೆದಾಟು ಯೋಜನೆಗಾಗಿ ರಾಜ್ಯ ಕಾಂಗ್ರೆಸ್ ಪಾದಯಾತ್ರೆ ನಡೆಸಲು ನಿರ್ಧರಿಸಿದೆ. ಆದ್ರೆ ಇದೇ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಟಫ್ ರೂಲ್ಸ್ ಜಾರಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರೊ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಾವು ಪಾದಯಾತ್ರೆ ಮಾಡಿಯೇ ಮಾಡ್ತೇವೆ, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ, ಈ ಪಾದಯಾತ್ರೆ ಜನರ ಒಳಿತಿಗೆ ಹಮ್ಮಿಕೊಂಡಿರುವ ಕಾರ್ಯಕ್ರಮ ಎಂದಿದ್ದಾರೆ.
ಜನರನ್ನ ಉಳಿಸುವ ಕೆಲಸ ಮಾಡುತ್ತಿದ್ದೇವೆ, ನಮ್ಮ ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗಲ್ಲ. ಪಾದಯಾತ್ರೆ ನಿಲ್ಲಿಸಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿ ಮಾಡಿದೆಯ ಎಂಬ ಪ್ರಶ್ನೆ ಶುರುವಾಗಿದೆ. ಅದೆಲ್ಲ ನನಗೆ ಗೊತ್ತಿಲ್ಲ, ಆದರೆ ನಮ್ಮ ಪಾದಯಾತ್ರೆ ನಿಲ್ಲಲ್ಲ. ನಾವು ಪಾದಯಾತ್ರೆ ಮಾಡಿಯೇ ಮಾಡ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದೇ ಜನವರಿ 9 ರಿಂದ ಕನಕಪುರ ತಾಲ್ಲೂಕಿನಿಂದ ಬೆಂಗಳೂರಿಗೆ ಮೇಕೆದಾಟು ಯೋಜನೆಗೆ ಒತ್ತಾಯಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯಲ್ಲಿ ಎಲ್ಲಾ ಜಿಲ್ಲೆಗಳ ಪಕ್ಷದ ಕಾರ್ಯಕರ್ತರು ಸೇರಿದಂತೆ 7 ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈಗಾಗಲೇ 10 ದಿನಗಳ ಪಾದಯಾತ್ರೆಗೆ ನೋಂದಣಿ ಮಾಡಿಕೊಳ್ಳಲಾಗಿದ್ದು, ಬೃಹತ್ ರ್ಯಾಲಿಯಾಗುವ ಸಾಧ್ಯತೆಯಿದೆ.