ಪಾನ್ ಕಾರ್ಡ್ ಹಾಗೂ ಆಧಾರ್ ಈಗ ಎಲ್ಲದಕ್ಕೂ ಬಹು ಮುಖ್ಯ. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ ಜೊತೆ ಆಧಾರ್ ಜೋಡಣೆ ಮಾಡಲು ಸೂಚಿಸಿತ್ತು.
ಇದಕ್ಕಾಗಿ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು. ಇಷ್ಟಾದರೂ ಕೂಡ ಕೆಲವರು ಈವರೆಗೆ ಪಾನ್ ಜೊತೆ ಆಧಾರ್ ಜೋಡಣೆ ಮಾಡದಿರುವುದು ಕಂಡುಬಂದಿದೆ.
ಈ ಹಿನ್ನಲೆಯಲ್ಲಿ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಮಾರ್ಚ್ 31ರ ಒಳಗಾಗಿ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.