ಸಣ್ಣ ಮತ್ತು ಅತಿ ಸಣ್ಣ ರೈತರ ನೆರವಿಗಾಗಿ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ ಮೂರು ತಿಂಗಳಿಗೊಮ್ಮೆ ತಲಾ ಎರಡು ಸಾವಿರ ರೂಪಾಯಿಗಳಂತೆ ಒಟ್ಟು ಆರು ಸಾವಿರ ರೂಪಾಯಿಗಳನ್ನು ನೀಡಲಾಗುತ್ತದೆ.
ಈ ಹಣ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದ್ದು, ಯೋಜನೆ ಶುರುವಾದ ಬಳಿಕ ಈಗ ರೈತರು 12ನೇ ಕಂತಿನ ಹಣ ಸ್ವೀಕರಿಸಬೇಕಿದೆ. ಈ ಕುರಿತಂತೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ 12ನೇ ಕಂತಿನ ಹಣ ಎರಡು ಸಾವಿರ ರೂಪಾಯಿಗಳು ಸೆಪ್ಟೆಂಬರ್ 30ರ ನಾಳೆ ಬ್ಯಾಂಕ್ ಖಾತೆಗೆ ಜಮೆಯಾಗುವ ಸಾಧ್ಯತೆ ಇದೆ. ಆದರೆ ಸರ್ಕಾರದಿಂದ ಈ ಕುರಿತು ಯಾವುದೇ ಅಧಿಕೃತ ಮಾಹಿತಿ ಪ್ರಕಟವಾಗಿಲ್ಲ.