alex Certify ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ವರ್ಗಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಂ ಕಿಸಾನ್ ಸಮ್ಮಾನ್ ಯೋಜನೆ; ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂ. ವರ್ಗಾವಣೆ

ಬೆಂಗಳೂರು: ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ರಾಜ್ಯದ 50.36 ಲಕ್ಷ ರೈತರಿಗೆ 1007.26 ಕೋಟಿ ರೂಪಾಯಿಯನ್ನು ಪ್ರಧಾನಿ ಮೋದಿ ವರ್ಗಾವಣೆ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಇಂದು ಪಿಎಂ ಕಿಸಾನ್ ಸಮ್ಮಾನ್‌ ಸಮ್ಮೇಳನದಲ್ಲಿ 600 ಪಿಎಂ ಕಿಸಾನ್‌ ಸಮೃದ್ಧಿ ಕೇಂದ್ರಗಳನ್ನು ಉದ್ಘಾಟಿಸಿದರು. ಈ ವೇಳೆ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಮೂಲಕ 16 ಸಾವಿರ ಕೋಟಿ ರೂ.ಗಳ 12 ನೇ ಕಂತಿನ ಆರ್ಥಿಕ ನೆರವನ್ನು ಫಲಾನುಭವಿ ಕೃಷಿಕರಿಗೆ ವರ್ಗಾಯಿಸಿದರು.

ಈ ವೇಳೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 12ನೇ ಕಂತಿನಡಿ ಕರ್ನಾಟಕದ 50.36 ಲಕ್ಷ ರೈತರಿಗೆ 1007.26 ಕೋಟಿ ಸಹಾಯ ಧನವನ್ನು ರೈತರ ಖಾತಗೆ ವರ್ಗಾವಣೆ ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...