alex Certify ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ ‘ಬಿಗ್ ಶಾಕ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರಿಗೆ ‘ಬಿಗ್ ಶಾಕ್’

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಈಗಾಗಲೇ ವಿಚಾರಣೆ ನಡೆಸುತ್ತಿರುವ ಸಿಐಡಿ ಹಲವರನ್ನು ಬಂಧನಕ್ಕೆ ಒಳಪಡಿಸಿದೆ. ಅಲ್ಲದೆ ತಲೆಮರೆಸಿಕೊಂಡಿರುವ ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯ ಹಾಗರಗಿ ಬಂಧನಕ್ಕೆ ತೀವ್ರ ಪ್ರಯತ್ನ ನಡೆದಿದೆ.

ಇದರ ಮಧ್ಯೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಸಿಕ್ಕಿಬಿದ್ದಿರುವ ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಕರಕುಶಲ ವೃತ್ತಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ‘ಬಂಪರ್’

ಈ ಅಭ್ಯರ್ಥಿಗಳು ಜೀವನಪರ್ಯಂತ ಪೊಲೀಸ್ ಪರೀಕ್ಷೆ ಬರೆಯದಂತೆ ಅನರ್ಹಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಲ್ಲದೆ ಅಕ್ರಮವೂ ಬಹುತೇಕ ಪರೀಕ್ಷಾ ಕೇಂದ್ರಗಳಲ್ಲಿಯೇ ನಡೆದಿರುವ ಬಗ್ಗೆ ತಿಳಿದು ಬಂದಿದೆ ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...