
ಶಾಲ್ಮಲಿ ಎಂಬ ಬಾಲಕಿ ಪಿಯಾನೋ ನುಡಿಸಿದ್ದು ಇದನ್ನು ಅನಂತಕುಮಾರ್ ಪೋಸ್ಟ್ ಮಾಡಿದ್ದಾರೆ. ಬಳಿಕ ಇದು ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಪ್ರಧಾನಿ ಮೋದಿ ಕೂಡ ಬಾಲಕಿಯ ಪ್ರತಿಭೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ನರೇಂದ್ರ ಮೋದಿಯವರು, ಅಸಾಧಾರಣ ಪ್ರತಿಭೆ ಮತ್ತು ಸೃಜನಶೀಲತೆ ಇರುವ ಶಾಲ್ಮಲಿಗೆ ಶುಭಾಶಯಗಳು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಈ ವಿಡಿಯೋ ನಿಮ್ಮ ಮೊಗದಲ್ಲಿ ಮಂದಹಾಸ ಮೂಡಿಸಬಹುದು ಎಂದು ಸಹ ತಿಳಿಸಿದ್ದಾರೆ.