ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೇ 18 ರ ವರೆಗೆ ಇದು ನಡೆಯಲಿದೆ. ಇದರ ಮಧ್ಯೆ ಪದವಿಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಪಡೆದ ವರದಿ ಕಡ್ಡಾಯವಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದ್ದು, ಆದರೆ ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೇಳಿದೆ.
ಅಲ್ಲದೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಹಾಗೂ ಸ್ಯಾನಿಟೈಸ್ ಮಾಡುವುದು ಕಡ್ಡಾಯವಾಗಿದ್ದು, ಒಂದೊಮ್ಮೆ ಯಾವುದಾದರೂ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟರೆ ಅಂತವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತದೆ.