alex Certify ‘ಪಿಯುಸಿ’ ಮರು ಮೌಲ್ಯಮಾಪನ ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪಿಯುಸಿ’ ಮರು ಮೌಲ್ಯಮಾಪನ ಫಲಿತಾಂಶ ವೀಕ್ಷಿಸಲು ಇಲ್ಲಿದೆ ಮಾಹಿತಿ

ಕಳೆದ ಏಪ್ರಿಲ್ – ಮೇ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಈಗಾಗಲೇ ಜೂನ್ 18ರಂದು ಪ್ರಕಟಗೊಂಡಿದ್ದು, ಇದರಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಕೆಲವರು ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು.

ಇದೀಗ ಪದವಿಪೂರ್ವ ಶಿಕ್ಷಣ ಇಲಾಖೆ ಈ ಫಲಿತಾಂಶವನ್ನು ಜುಲೈ 31ರ ಭಾನುವಾರದಂದು ಪ್ರಕಟಿಸಿದೆ. ಇದು ವೆಬ್ ಸೈಟ್ ನಲ್ಲೂ ಸಹ ಲಭ್ಯವಿದೆ.

ವಿದ್ಯಾರ್ಥಿಗಳು ಮಂಡಳಿಯ ವೆಬ್ ಸೈಟ್ https://pue.karnataka.gov.in ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷಾ ವಿಭಾಗದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...