ಪಿಯು ಪರೀಕ್ಷೆ ಬರೆಯಲಿರುವ ಖಾಸಗಿ ಅಭ್ಯರ್ಥಿಗಳು, ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023ರ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳುವ ಅವಧಿಯನ್ನು ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರ ಮನವಿಯ ಮೇರೆಗೆ ಈ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ನವೆಂಬರ್ 28 ರ ವರೆಗೆ ವಿದ್ಯಾರ್ಥಿಗಳು ನೋಂದಾವಣಿ ಮಾಡಿಕೊಳ್ಳಬಹುದಾಗಿದೆ.
ನಿಗದಿತ ಶುಲ್ಕದ ಜೊತೆಗೆ 500 ರೂಪಾಯಿ ದಂಡ ಶುಲ್ಕ ಹಾಗೂ ಗರಿಷ್ಠ 700 ರೂಪಾಯಿ ಕಾರ್ಯನಿರತ ಶುಲ್ಕ ಪಾವತಿಸಿ ನೋಂದಾಯಿಸಿಕೊಳ್ಳಬಹುದಾಗಿದೆ. ನವೆಂಬರ್ 28 ಕಾಲೇಜಿಗೆ ಶುಲ್ಕ ಪಾವತಿಸಲು ಕೊನೆ ದಿನಾಂಕವಾಗಿದ್ದು, ಕಾಲೇಜಿನವರು ನವೆಂಬರ್ 29 ರಂದು ಖಜಾನೆಗೆ ಸಂದಾಯ ಮಾಡಲು ಹಾಗೂ ಡಿಡಿಪಿಗೆ ಕಚೇರಿಗೆ ಅರ್ಜಿ ಸಲ್ಲಿಸಲು ನವೆಂಬರ್ 30 ಅಂತಿಮ ದಿನವಾಗಿದೆ.