ಮೈಸೂರು: ಪತಿ-ಪತ್ನಿ ಜಗಳಕ್ಕೆ ಮನನೊಂದು ಪುಟ್ಟ ಮಗಳೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
35 ವರ್ಷದ ನಂದಿನಿ ಹಾಗೂ 9 ವರ್ಷದ ಸಿಂಚನಾ ಮೃತರು. ಕೌಟುಂಬಿಕ ಕಲಹದಿಂದ ಬೇಸತ್ತು ಮಗಳಿಗೆ ವಿಷವುಣಿಸಿದ ನಂದಿನಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಟಿ.ನರಸಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.