ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಪುತ್ತೂರಿನ ಪಡ್ನೂರು ಸನ್ನಿದಿ ಲೇಔಟ್ ನಿವಾಸಿ ಕಿಶೋರ್ ಕುಮಾರ್ ಎಂಬವರ ಪುತ್ರಿ 19 ವರ್ಷದ ಕೀರ್ತಿಕಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ.
ವಿವೇಕಾನಂದ ಕಾಲೇಜಿನಲ್ಲಿ ತೃತೀಯ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಕೀರ್ತಿಕಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಾವ ಕಾರಣಕ್ಕೆ ಇಂತಹ ನಿರ್ಧಾರ ಕೈಗೊಂಡಿದ್ದರು ಎಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.