
ದೊಡ್ಡಬಳ್ಳಾಪುರದಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಒಡೆತನದ ಮ್ಯಾಗ್ನೆಟಿಕ್ ಫೋಟೋ ಕಂಪನಿ ಇದ್ದು, ಸೋಮವಾರದಂದು ಈ ಕಂಪನಿ ಇರುವ ಭಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚೆನ್ನಮ್ಮ ಅವರೊಂದಿಗೆ ತೆರಳಿದ್ದರು.
ಕಂಪನಿಯ ಯಂತ್ರಗಳಿಗೆ ಕುಟುಂಬ ಸಮೇತರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೂಜೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಕೂಡ ಪೂಜೆಯಲ್ಲಿ ಭಾಗವಹಿಸಿದ್ದರು. ಕಳೆದ ವರ್ಷವೂ ಸಹ ಬೊಮ್ಮಾಯಿಯವರು ಪುತ್ರನ ಕಂಪನಿಯ ಆಯುಧ ಪೂಜೆಯಲ್ಲಿ ಭಾಗವಹಿಸಿದ್ದರು.