alex Certify ಪುತ್ರ – ಭಾವಿ ಸೊಸೆಯೊಂದಿಗೆ ತಿರುಪತಿ ದೇವಸ್ಥಾನಕ್ಕೆ ಮುಕೇಶ್ ಅಂಬಾನಿ ಭೇಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುತ್ರ – ಭಾವಿ ಸೊಸೆಯೊಂದಿಗೆ ತಿರುಪತಿ ದೇವಸ್ಥಾನಕ್ಕೆ ಮುಕೇಶ್ ಅಂಬಾನಿ ಭೇಟಿ

ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಶುಕ್ರವಾರದಂದು ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ, ಭಾವಿ ಸೊಸೆ ರಾಧಿಕಾ ಮರ್ಚೆಂಟ್ ಜೊತೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅಭಿಷೇಕ, ನಿಜಪಾದ ದರ್ಶನ ಸೇವೆಯನ್ನು ಮುಕೇಶ್ ಅಂಬಾನಿ ಮತ್ತು ಕುಟುಂಬಸ್ಥರು ಮಾಡಿದ್ದು, ಜೊತೆಗೆ ದೇವಸ್ಥಾನಕ್ಕೆ 1.5 ಕೋಟಿ ರೂಪಾಯಿಗಳ ದೇಣಿಗೆಯನ್ನು ಅರ್ಪಿಸಿದ್ದಾರೆ.

ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರನ್ನು ತಿರುಮಲ ತಿರುಪತಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಧರ್ಮರೆಡ್ಡಿ ಸ್ವಾಗತಿಸಿದ್ದು, ವಿಶೇಷ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...