alex Certify ಪುನೀತ್ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಟಾಲಿವುಡ್ ಸ್ಟಾರ್ ನಂದಮೂರಿ ಬಾಲಕೃಷ್ಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಟಾಲಿವುಡ್ ಸ್ಟಾರ್ ನಂದಮೂರಿ ಬಾಲಕೃಷ್ಣ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಟಾಲಿವುಡ್ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

ಕಂಠೀರವ ಸ್ಟೇಡಿಯಂಗೆ ಆಗಮಿಸಿ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ನಟ ಬಾಲಕೃಷ್ಣ ಗದ್ಗದಿತರಾಗಿ ಕೆಲಕಾಲ ಕಣ್ಣೀರಾದರು… ಪುನೀತ್ ಸಹೋದರ ಶಿವಣ್ಣನನ್ನು ತಬ್ಬಿಕೊಂಡು ಕಣ್ಣೀರಿಟ್ಟರು. ಬಳಿಕ ಪುನೀತ್ ಪತ್ನಿ ಅಶ್ವಿನಿ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ತಿಂಗಳು ಮುಗಿಯಲು ಒಂದೇ ದಿನ ಬಾಕಿ : ಇಂದೇ ಮುಗಿಸಿ ಈ ಕೆಲಸ

ಪುನೀತ್ ನಿಧನ ಸ್ಯಾಂಡಲ್ ವುಡ್ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತವನ್ನುಂಟುಮಾಡಿದ್ದು, ಕಾಲಿವುಡ್, ಟಾಲಿವುಡ್ ಸೇರಿದಂತೆ ಹಲವು ಚಿತ್ರರಂಗದ ಗಣ್ಯರು, ಕ್ರೀಡಾಪಟುಗಳು ಪುನೀತ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...