alex Certify ಪುನೀತ್ ಅಂತಿಮ ದರ್ಶನ ಪಡೆದ ಪ್ರಭುದೇವ, ರಾಣಾ ದಗ್ಗುಬಾಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ಅಂತಿಮ ದರ್ಶನ ಪಡೆದ ಪ್ರಭುದೇವ, ರಾಣಾ ದಗ್ಗುಬಾಟಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಇಡೀ ಭಾರತೀಯ ಚಿತ್ರರಂಗವೇ ದಿಗ್ಭ್ರಾಂತಗೊಂಡಿದ್ದು, ಕನ್ನಡ ಚಿತ್ರರಂಗ ಮಾತ್ರವಲ್ಲ, ಟಾಲಿವುಡ್, ಕಾಲಿವುಡ್, ಮಾಲಿವುಡ್ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಇರಿಸಲಾಗಿರುವ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಸಾಗರೋಪಾದಿಯಲ್ಲಿ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಈ ನಡುವೆ ನಟ, ನೃತ್ಯ ನಿರ್ದೇಶಕ ಪ್ರಭುದೇವ, ಸಹೋದರ ನಾಗೇಂದ್ರ ಹಾಗೂ ಟಾಲಿವುಡ್ ನಟ ರಾಣಾ ದಗ್ಗುಬಾಟಿ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಲಿರುವ ವಿನಯ್ ರಾಜ್ ಕುಮಾರ್

ಪುನೀತ್ ಪಾರ್ಥಿವ ಶರೀರವನ್ನು ಕಂಡು ಪ್ರಭುದೇವ ಹಾಗೂ ರಾಣಾ ಇಬ್ಬರೂ ಕ್ಷಣಕಾಲ ಕಣ್ಣೀರಾದರು. ಈ ವೇಳೆ ಮಾತನಾಡಿದ ಪ್ರಭುದೇವ, ಪುನೀತ್ ಅವರ ನಿಧನ ಆಘಾತ ತಂದಿದೆ. ಅವರ ನೃತ್ಯ, ನಯ ವಿನಯ ಎಲ್ಲರಿಗೂ ಅಚ್ಚುಮೆಚ್ಚಾಗಿತ್ತು. ಇದ್ದಕ್ಕಿದ್ದಂತೆ ನಮ್ಮೆಲ್ಲರನ್ನು ಅಗಲಿರುವುದು ಶಾಕ್ ಆಗಿದೆ ಎಂದು ಸಂತಾಪ ಸೂಚಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...