alex Certify ಪುನೀತ್ ನಿವಾಸಕ್ಕೆ ಪೊಲೀಸ್ ಭದ್ರತೆ; 40ಕ್ಕೂ ಹೆಚ್ಚು ಪೊಲೀಸರ ನಿಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ನಿವಾಸಕ್ಕೆ ಪೊಲೀಸ್ ಭದ್ರತೆ; 40ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಂಗಳೂರು: ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ದೊಡ್ಮನೆ ಕುಟುಂಬದಿಂದ ಅರಮನೆ ಮೈದಾನದಲ್ಲಿ ಇಂದು ಅನ್ನ ಸಂತರ್ಪಣೆ ಆಯೋಜಿಸಲಾಗಿದೆ. ಈಗಾಗಲೇ ಸಾವಿರಾರು ಅಭಿಮಾನಿಗಳು ಅರಮನೆ ಮೈದಾನದತ್ತ ಧಾವಿಸುತ್ತಿದ್ದಾರೆ. ಈ ನಡುವೆ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಪುನೀತ್ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಅಭಿಮಾನಿಗಳು ಪುನೀತ್ ಮನೆ ಬಳಿ ಆಗಮಿಸುವ ಸಾಧ್ಯತೆ ಇರುವುದರಿಂದ ಯಾವುದೇ ಅವಘಡಗಳು ಸಂಭವಿಸಬಾರದು ಎಂಬ ಕಾರಣಕ್ಕೆ ಪುನೀತ್ ಮನೆ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದ ರಿಷಬ್ ಪಂತ್, ಆಕಸ್ಮಿಕವಾಗಿ ತಾಗಿದ ಬ್ಯಾಟ್ ಗೆ ಗೌರವ

ಎಸಿಪಿ, ಇನ್ಸ್ ಪೆಕ್ಟರ್ ಸೇರಿ 40ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಪುನೀತ್ ಮನೆ ಸಂಪರ್ಕಿಸುವ ರಸ್ತೆಗಳಿಗೆ ಬ್ಯಾರಿಕೇಡ್ ಗಳನ್ನು ಹಾಕಲಾಗಿದ್ದು, ಜನರ ಓಡಾಡಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...