ಖ್ಯಾತ ನಟ ದಿವಂಗತ ಪುನೀತ್ ರಾಜಕುಮಾರ್ ಅವರ ಸಂಸ್ಮರಣೆಯಲ್ಲಿ ಶಿವಮೊಗ್ಗದಲ್ಲಿ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 1ರ ವರೆಗೆ ದಸರಾ ಚಲನಚಿತ್ರೋತ್ಸವ ಆಯೋಜಿಸಲಾಗಿದ್ದು, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಬಿ.ಎಸ್. ಲಿಂಗದೇವರು ಇಂದು ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಅವರ ಅಭಿನಯದ ‘ರಾಜಕುಮಾರ’ ಚಿತ್ರ ಪ್ರದರ್ಶನಗೊಂಡಿದೆ.
ದಸರಾ ಚಲನಚಿತ್ರೋತ್ಸವದ ಅಂಗವಾಗಿ ಶಿವಮೊಗ್ಗದ ವಿವಿಧ ಚಿತ್ರಮಂದಿರಗಳಲ್ಲಿ ಸಾರ್ವಜನಿಕರಿಗೆ ಉಚಿತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಅದರ ಸಂಪೂರ್ಣ ವಿವರ ಇಲ್ಲಿದೆ.
ಸೆಪ್ಟಂಬರ್ 28 ರಂದು ಬೆಳಿಗ್ಗೆ 8:30 ಕ್ಕೆ ಹೆಚ್.ಪಿ.ಸಿ. ಚಿತ್ರಮಂದಿರದಲ್ಲಿ ಕಿಚ್ಚ ಸುದೀಪ್ ಅವರ ಅಭಿನಯದ ‘ಮಾಣಿಕ್ಯ’, ಸೆಪ್ಟೆಂಬರ್ 29ರಂದು ಬೆಳಗ್ಗೆ 8:30 ಕ್ಕೆ ಮಂಜುನಾಥ ಚಿತ್ರಮಂದಿರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಅಭಿನಯದ ‘ಓಂ’ ಚಲನಚಿತ್ರ ಪ್ರದರ್ಶನಗೊಳ್ಳಲಿದೆ.
ಸೆಪ್ಟೆಂಬರ್ 30ರಂದು ಬೆಳಿಗ್ಗೆ 8:30 ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’, ಅಕ್ಟೋಬರ್ 1ರಂದು ಬೆಳಗ್ಗೆ 8:30 ಕ್ಕೆ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಡಾಲಿ ಧನಂಜಯ್ ನಾಯಕ ನಟನಾಗಿ ಅಭಿನಯಿಸಿರುವ ‘ಬಡವ ರಾಸ್ಕಲ್’ ಪ್ರದರ್ಶನಗೊಳ್ಳಲಿದೆ.