alex Certify ಪುನೀತ್ ರಾಜ್ ಕುಮಾರ್ ಗೆ ‘ಪದ್ಮಶ್ರೀ’ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪುನೀತ್ ರಾಜ್ ಕುಮಾರ್ ಗೆ ‘ಪದ್ಮಶ್ರೀ’ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು…?

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಗೌರವ ನೀಡಬೇಕು ಎಂಬ ಆಗ್ರಹ ಕೇಳಿಬರುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧರಿಸುವುದಾಗಿ ತಿಳಿಸಿದ್ದಾರೆ.

ಇಂದು ಪುನೀತ್ ರಾಜ್ ಕುಮಾರ್ ಅವರ 11ನೇ ದಿನದ ಕಾರ್ಯವಾಗಿದ್ದು, ನಾನು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ ಎಂದರು. ಇದೇ ವೇಳೆ ಅಪ್ಪುಗೆ ಪದ್ಮಶ್ರೀ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೆ ತನ್ನದೇ ಆದ ಕೆಲವೊಂದು ಮಾನದಂಡಗಳಿವೆ. ಹೀಗಾಗಿ ಸೂಕ್ತ ಸಮಯದಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

‘ಗುಡ್ ಲಕ್ ಸಖಿ’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಕನ್ನಡ ಚಿತ್ರರಂಗ, ಅಭಿಮಾನಿಗಳು ಹಾಗೂ ಸಾರ್ವಜನಿಕರು, ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಗೌರವ ನೀಡಬೇಕು ಎಂಬ ಬೇಡಿಕೆ ಇಡುತ್ತಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...