ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜಕುಮಾರ್ ನಮ್ಮನ್ನಗಲಿ ಹಲವು ತಿಂಗಳುಗಳೇ ಕಳೆದರೂ ಸಹ ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದ್ದಾರೆ. ಅವರ ನೆನಪಿನಲ್ಲಿ ಪ್ರತಿನಿತ್ಯವೂ ಕಾರ್ಯಕ್ರಮಗಳು ನಡೆಯುತ್ತಲೇ ಇರುತ್ತವೆ.
ಪ್ರತಿಯೊಂದು ಊರಿನಲ್ಲೂ ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್, ಕಟ್ ಔಟ್ ಗಳು ರಾರಾಜಿಸುತ್ತಿವೆ. ಅಲ್ಲದೆ ರಸ್ತೆ, ಬಡಾವಣೆಗಳಿಗೆ ಅವರ ಹೆಸರನ್ನಿಡುವ ಮೂಲಕ ಸ್ಮರಿಸಿಕೊಳ್ಳಲಾಗುತ್ತಿದೆ. ಇದರ ಮಧ್ಯೆ ಶಾಲಾ ಮಕ್ಕಳು ವಿಶಿಷ್ಟ ಕಾರ್ಯವೊಂದಕ್ಕೆ ಮುಂದಾಗಿದ್ದಾರೆ.
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ಪುನೀತ್’ ಅವರ ಹೆಸರಿನ ಸರ್ವೇಕ್ಷಣ ಉಪಗ್ರಹವನ್ನು ನಿರ್ಮಿಸುತ್ತಿದ್ದು, ಇದನ್ನು ಡಿಸೆಂಬರ್ 31ರೊಳಗಾಗಿ ಶ್ರೀ ಹರಿಕೋಟಾದಿಂದ ಉಡಾವಣೆ ಮಾಡಲಾಗುತ್ತದೆ.