alex Certify ‘ಪುಷ್ಕರಣಿ’ ಜೀರ್ಣೋದ್ದಾರಕ್ಕೆ ಕೈಜೋಡಿಸಿದ ರಾಕಿಂಗ್ ಸ್ಟಾರ್ ಯಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುಷ್ಕರಣಿ’ ಜೀರ್ಣೋದ್ದಾರಕ್ಕೆ ಕೈಜೋಡಿಸಿದ ರಾಕಿಂಗ್ ಸ್ಟಾರ್ ಯಶ್

ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಚಿತ್ರ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನು ಬರೆಯಲು ಸಜ್ಜಾಗುತ್ತಿದೆ. ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಕೆಜಿಎಫ್ ಚಾಪ್ಟರ್ 2 ಸದ್ಯದಲ್ಲೇ ಪಾತ್ರವಾಗಲಿದೆ.

ರಾಕಿಂಗ್ ಸ್ಟಾರ್ ಯಶ್ ಸಾಮಾಜಿಕ ಕಾರ್ಯಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದು ‘ಯಶೋ ಮಾರ್ಗ’ ಫೌಂಡೇಶನ್ ಮೂಲಕ ಮೂಲಕ ಈಗಾಗಲೇ ಹಲವಾರು ಜನೋಪಯೋಗಿ ಕಾರ್ಯಗಳನ್ನು ಮಾಡಿದ್ದಾರೆ.

BIG NEWS: ಮಾನ್ಸೂನ್ ಎಂಟ್ರಿ, 4 ದಿನ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಇದೀಗ ಅವರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಕೆಳದಿ ಅರಸರ ಕೊಡುಗೆಗಳು ಮತ್ತು ಜನಪರ ಕಾರ್ಯವನ್ನು ನೆನಪಿಸುವ ಚಂಪಕ ಸರಸ್ಸು ಪುಷ್ಕರಣಿಯನ್ನು ಜೀರ್ಣೋದ್ದಾರ ಮಾಡುವ ಕಾರ್ಯಕ್ಕೆ ತಮ್ಮ ಯಶೋ ಮಾರ್ಗ ಫೌಂಡೇಶನ್ ಮೂಲಕ ಕೈಜೋಡಿಸಿದ್ದಾರೆ.

ಈಗಾಗಲೇ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಪಾಳು ಬಿದ್ದಿದ್ದ ಕೆರೆ ಈಗ ನಳನಳಿಸುತ್ತಿದೆ. ವಿಶ್ವ ಪರಿಸರ ದಿನಾಚರಣೆ ದಿನವಾದ ಭಾನುವಾರದಂದು ಜಲತಜ್ಞ ಶಿವಾನಂದ ಕಳವೆ ಇದನ್ನು ಲೋಕಾರ್ಪಣೆಗೊಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...