alex Certify ‘ಪುಷ್ಪ’ ಚಿತ್ರದ ಮೂರು ದಿನದ ಕಲೆಕ್ಷನ್ ಎಷ್ಟು ಗೊತ್ತಾ….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪುಷ್ಪ’ ಚಿತ್ರದ ಮೂರು ದಿನದ ಕಲೆಕ್ಷನ್ ಎಷ್ಟು ಗೊತ್ತಾ….?

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಅಬ್ಬರ ಜೋರಾಗೇ ಇದೆ. ಮೊದಲ ದಿನದಲ್ಲೇ 71ಕೋಟಿ ಬಾಚಿಕೊಂಡಿದ್ದ ಈ ಸಿನಿಮಾ ಎರಡನೇ ದಿನಕ್ಕೆ 116 ಕೋಟಿ ಕಲೆಕ್ಷನ್ ಮಾಡಿದ್ದು, ಮೂರು ದಿನಕ್ಕೆ 173 ಕೋಟಿ ಗಳಿಕೆ ಮಾಡುವ ಮೂಲಕ ಬಾಕ್ಸಾಫೀಸ್ ಕೊಳ್ಳೆ ಹೊಡೆದಿದೆ. ಅಲ್ಲು ಅರ್ಜುನ್ ಅವರ ನಟನೆ ಹಾಗೂ ಡಿಫ್ರೆಂಟ್ ಲುಕ್ ಗೆ ಫ್ಯಾನ್ಸ್ ಗಳು ಫಿದಾ ಆಗಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣದ ಕಳ್ಳಸಾಗಾಣೆಕೆ ಕುರಿತ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದು, ಡಾಲಿ ಧನಂಜಯ್, ಅನಸೂಯಾ ಭಾರಧ್ವಾಜ್, ಸುನಿಲ್, ಫಹಾದ್ ಫಾಸಿಲ್, ರಾವ್ ರಮೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪುಷ್ಪರಾಜ್ ಆಗಿ ಅಲ್ಲು ಅರ್ಜುನ್ ಹಾಗೂ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ಅಭಿನಯಿಸಿದ್ದಾರೆ.

ದಕ್ಷಿಣ ಭಾರತದಲ್ಲೇ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ ಎಂದು ಎನಿಸಿಕೊಂಡಿದ್ದ ಅಲ್ಲು ಅರ್ಜುನ್ ಗೆ ಬಾಲಿವುಡ್ ಪ್ರೇಕ್ಷಕರಿಂದಲೂ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದ್ದು ಪುಷ್ಪ ಎರಡನೇ ಭಾಗಕ್ಕೆ ಕಾಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...