ಪೂಜೆ ಮಾಡುತ್ತಿರುವಾಗಲೇ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.
40 ವರ್ಷದ ನಾಗಣ್ಣ ಮೃತಪಟ್ಟ ಅರ್ಚಕರಾಗಿದ್ದು ಇವರು ಮಂಗಳವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಪೂಜೆಗಾಗಿ ಮಲೆಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿದ್ದು ಈ ವೇಳೆ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಹನೂರು ಸರ್ಕಾರಿ ಆಸ್ಪತ್ರೆಗೆ ಕರೆ ತರುತ್ತಿರುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಒಂದೂವರೆ ವರ್ಷದ ಬಳಿಕ ಇವರಿಗೆ ಮಹದೇಶ್ವರನಿಗೆ ಪೂಜೆ ಸಲ್ಲಿಸುವ ಸರದಿ ಬಂದಿತ್ತು ಎಂದು ತಿಳಿದುಬಂದಿದೆ.