alex Certify ಪೂಜೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಅರ್ಚಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೂಜೆ ಮಾಡುತ್ತಿರುವಾಗಲೇ ಕುಸಿದು ಬಿದ್ದು ಅರ್ಚಕ ಸಾವು

ಪೂಜೆ ಮಾಡುತ್ತಿರುವಾಗಲೇ ಅರ್ಚಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದಿದೆ.

40 ವರ್ಷದ ನಾಗಣ್ಣ ಮೃತಪಟ್ಟ ಅರ್ಚಕರಾಗಿದ್ದು ಇವರು ಮಂಗಳವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಪೂಜೆಗಾಗಿ ಮಲೆಮಹದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳಿದ್ದು ಈ ವೇಳೆ ಕುಸಿದು ಬಿದ್ದಿದ್ದಾರೆ.

ಕೂಡಲೇ ಅವರನ್ನು ಆಂಬುಲೆನ್ಸ್ ಮೂಲಕ ಹನೂರು ಸರ್ಕಾರಿ ಆಸ್ಪತ್ರೆಗೆ ಕರೆ ತರುತ್ತಿರುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಒಂದೂವರೆ ವರ್ಷದ ಬಳಿಕ ಇವರಿಗೆ ಮಹದೇಶ್ವರನಿಗೆ ಪೂಜೆ ಸಲ್ಲಿಸುವ ಸರದಿ ಬಂದಿತ್ತು ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...