ಬೆಂಗಳೂರು: ದೇಶದ ಜನರಿಗೆ ಅಚ್ಛೇ ದಿನ್ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಏರಿದ ಪ್ರಧಾನಿ ಮೋದಿ ಇಂದು ಜನರಿಗೆ ನರಕ ಎಂದರೇನು ಎಂಬುದನ್ನು ತೋರಿಸುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಅನಿಲ ದರ ಸೇರಿದಂತೆ ಅಗತ್ಯ ವಸ್ತುಗಳ ದರವನ್ನು ಏರಿಕೆ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಮೊದಲೇ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಗಾಯದ ಮೇಲೆ ಬರೆ – ಇವತ್ತೂ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ
ಪೆಟ್ರೋಲ್ ದರ ಏರಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದು, ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ದರ 100 ರೂಪಾಯಿ ಗಡಿ ದಾಟಿದೆ. ತೈಲ ದರ ಏರಿಕೆಯಾದರೆ ಎಲ್ಲಾ ವಸ್ತುಗಳ ದರ ಏರಿಕೆಯಾಗುತ್ತೆ. ಸಾಮಾನ್ಯ ಜನ ಜೀವನ ಮಾಡುವುದಾದರು ಹೇಗೆ? ಎಂದು ಪ್ರಶ್ನಿಸಿದರು.
ರಕ್ತ ಹೆಪ್ಪುಗಟ್ಟುವಿಕೆ ಭಯದಲ್ಲಿ ಕೊರೊನಾ ಲಸಿಕೆ ತೆಗೆದುಕೊಳ್ಳಲು ಹಿಂಜರಿಯಬೇಡಿ: ತಜ್ಞರ ಮಹತ್ವದ ಸಲಹೆ
ಈ ಹಿಂದೆ ಯುಪಿಎ ಅವಧಿಯಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ಮೋದಿಯವರು ಧರಣಿ ನಡೆಸಿದ್ದರು. ಈಗ ಅವರೇ ದರ ಏರಿಕೆ ಮಾಡಿದ್ದಾರೆ. ದೇಶದ ಜನತೆಗೆ ಅಚ್ಛೇ ದಿನ್ ಭರವಸೆ ನೀಡಿ ಅಧಿಕಾರಕ್ಕೆ ಬಂದು ಈಗ ತಿಗಣೆಗಳ ತರಹ ಜನರ ರಕ್ತ ಹೀರುತ್ತಿದ್ದಾರೆ. ಪೆಟ್ರೋಲ್ ದರ ಏರಿಕೆಯಿಂದಾಗಿ ಜನಸಾಮಾನ್ಯರು ಜೀವನ ನಡೆಸುವುದು ದುಸ್ತರವಾಗಿದೆ. ದೇಶದಲ್ಲಿ ಉಂಟಾಗುತ್ತಿರುವ ದುಸ್ಥಿತಿಯಿಂದಾಗಿ ಪ್ರತಿದಿನ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.