alex Certify ಪೆಟ್ರೋಲ್ ದರ, GST ಬಗ್ಗೆ ಕೇಂದ್ರ ಸರ್ಕಾರಕ್ಕೆ ಹೆಚ್.ಡಿ.ಕೆ. ಸಲಹೆ; ಕಾಂಗ್ರೆಸ್ ಹೋರಾಟದ ಹಿಂದಿನ ಮರ್ಮವೇನು…?ಕುಮಾರಸ್ವಾಮಿ ಪ್ರಶ್ನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೆಟ್ರೋಲ್ ದರ, GST ಬಗ್ಗೆ ಕೇಂದ್ರ ಸರ್ಕಾರಕ್ಕೆ ಹೆಚ್.ಡಿ.ಕೆ. ಸಲಹೆ; ಕಾಂಗ್ರೆಸ್ ಹೋರಾಟದ ಹಿಂದಿನ ಮರ್ಮವೇನು…?ಕುಮಾರಸ್ವಾಮಿ ಪ್ರಶ್ನೆ

ಬೆಂಗಳೂರು: ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಪೆಟ್ರೋಲ್‌ ಅನ್ನು ಜಿ ಎಸ್ ಟಿ ಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು ಜಿ ಎಸ್ ಟಿ ಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ. ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು ಜಿ ಎಸ್ ಟಿಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ನಾಳೆಯಿಂದಲೇ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವು – ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ 60–65 ರೂ. ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ 30 ರೂ. ಮೀರಬಾರದು. ಆಗ ಪೆಟ್ರೋಲ್‌ 65–70 ರೂ. ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ.

ಅಮ್ಮನ ಪ್ರಾಣ ಉಳಿಸಿ; ಬ್ಲಾಕ್ ಫಂಗಸ್ ಗೆ ಔಷಧಿ ನೀಡುವಂತೆ ಸರ್ಕಾರದ ಬಳಿ ಕಣ್ಣೀರಿಟ್ಟ ಪುತ್ರಿ

ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ ಜಿ ಎಸ್ ಟಿಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು ಜಿ ಎಸ್ ಟಿಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. ಜಿ ಎಸ್ ಟಿಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ ಎಂದು ಹೇಳಿದ್ದಾರೆ.

ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು. ಜತೆಗೆ ಪೆಟ್ರೋಲನ್ನು ಜಿ ಎಸ್ ಟಿಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ಜೆಡಿಎಸ್ ನಿಲುವು ಎಂದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...