alex Certify ಪೇಶಾವರ ಮಸೀದಿ ಸ್ಪೋಟದ ಹೊಣೆ ಹೊತ್ತ ಇಸ್ಲಾಮಿಕ್​ ಸ್ಟೇಟ್ಸ್​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೇಶಾವರ ಮಸೀದಿ ಸ್ಪೋಟದ ಹೊಣೆ ಹೊತ್ತ ಇಸ್ಲಾಮಿಕ್​ ಸ್ಟೇಟ್ಸ್​..!

ಪಾಕಿಸ್ತಾನದ ಪೇಶಾವರದ ಮಸೀದಿಯಲ್ಲಿ ನಿನ್ನೆ 50ಕ್ಕೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್​ ಉಗ್ರಗಾಮಿ ಸಂಘಟನೆ ಇಸ್ಲಾಮಿಕ್​ ಸ್ಟೇಟ್ಸ್​ ಹೊತ್ತುಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಪೇಶಾವರದಲ್ಲಿ ಪೊಲೀಸ್​ ಅಧಿಕಾರಿಗಳ ಮೇಲೆ ಇಬ್ಬರು ಭಯೋತ್ಪಾದಕರು ಗುಂಡು ಹಾರಿಸಿದ ಬಳಿಕ ಮಸೀದಿಯೊಳಗೆ ಬಾಂಬ್​ ಸ್ಫೋಟಗೊಂಡಿತ್ತು. ಇವರಲ್ಲಿ ಒಬ್ಬರು ಕಟ್ಟಡದ ಒಳಗೆ ಪ್ರವೇಶಿಸಿ ಸ್ಫೋಟ ನಡೆಸಿದ್ದರು. ಈ ದಾಳಿಯಲ್ಲಿ 57 ಮಂದಿ ಸಾವನ್ನಪ್ಪಿದ್ದರೆ 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.

ಶುಕ್ರವಾರದ ಪ್ರಾರ್ಥನೆಯನ್ನು ಸಲ್ಲಿಸಲು ಮುಸ್ಲಿಮರು ಕುಚಾ ರಿಸಲ್ದಾರ್​ ಮಸೀದಿಯಲ್ಲಿ ಸೇರಿದ್ದ ವೇಳೆಯಲ್ಲಿ ಈ ಸ್ಫೋಟ ಸಂಭವಿಸಿತ್ತು. ಗಾಯಾಳುಗಳನ್ನು ಲೇಡಿ ರೀಡಿಂಗ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಖೈಬರ್ ಪಖ್ತುಂಖ್ವಾ ಮುಖ್ಯಮಂತ್ರಿಯ ಸಲಹೆಗಾರ ಮುಹಮ್ಮದ್ ಅಲಿ ಸೈಫ್ ಈ ವಿಚಾರವಾಗಿ ಮಾತನಾಡಿದ್ದು ಭಯೋತ್ಪಾದಕರು ಮೊದಲು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿದರು ಮತ್ತು ಪೊಲೀಸರೊಂದಿಗೆ ಗುಂಡಿನ ಚಕಮಕಿ ನಡೆಸಿದರು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...