alex Certify ಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಜಿಗಿತ; ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಜಿಗಿತ; ವ್ಯಕ್ತಿ ಸಾವು

ಪ್ರಕರಣ ಒಂದರ ವಿಚಾರಣೆಗಾಗಿ ಪೊಲೀಸರು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಸೇತುವೆಯಿಂದ ಹಾರಿದ ವ್ಯಕ್ತಿ ಸಾವಿಗೀಡಾದ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ಕಬ್ಬಳ ನಿವಾಸಿ ಹರೀಶ್ ಮೃತಪಟ್ಟ ವ್ಯಕ್ತಿಯಾಗಿದ್ದು, ಈತನನ್ನು ಪ್ರಕರಣದ ವಿಚಾರಣೆಗೆ ಗಾಂಧಿನಗರ ಠಾಣೆ ಪೊಲೀಸರು ಕರೆದುಕೊಂಡು ಹೋಗುವ ವೇಳೆ ತೋಳಹುಣಸೆ ಸೇತುವೆ ಮೇಲಿನಿಂದ ಹಾರಿದ್ದರು.

ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರೀಶ್ ಸಾವಿಗೆ ಪೊಲೀಸರೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸ್ಥಳಕ್ಕೆ ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಭೇಟಿ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...