alex Certify ಪೊಲೀಸ್ ಕುಟುಂಬಗಳೊಂದಿಗೆ ಭುವನ ಸುಂದರಿ ಹರ್ನಾಜ್ ಸಂಧು ಬೊಂಬಾಟ್ ಡಾನ್ಸ್…..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಕುಟುಂಬಗಳೊಂದಿಗೆ ಭುವನ ಸುಂದರಿ ಹರ್ನಾಜ್ ಸಂಧು ಬೊಂಬಾಟ್ ಡಾನ್ಸ್…..!

ಗ್ರೇಟರ್ ನೋಯ್ಡಾ: ಹರ್ನಾಜ್ ಕೌರ್ ಸಂಧು ಅವರು ಡಿಸೆಂಬರ್ 2021 ರಲ್ಲಿ ಇತಿಹಾಸವನ್ನು ಸೃಷ್ಟಿಸಿದ್ದು ನಿಮಗೆಲ್ಲಾ ತಿಳಿದೇ ಇದೆ. ಬರೋಬ್ಬರಿ 21 ವರ್ಷಗಳ ನಂತರ ಮಿಸ್ ಯೂನಿವರ್ಸ್ ಕಿರೀಟವನ್ನು ಅವರು ತೊಟ್ಟಿರುವುದು ಭಾರತೀಯರೆಲ್ಲರಿಗೂ ಹೆಮ್ಮೆಯ ವಿಚಾರ.

ಭುವನ ಸುಂದರಿ ಪಟ್ಟ ಸಿಕ್ಕ ಕೆಲವೇ ದಿನಗಳಲ್ಲಿ ಭಾರತಕ್ಕೆ ಆಗಮಿಸಿದ ಅವರಿಗೆ ಅದ್ಧೂರಿ ಸ್ವಾಗತ ದೊರೆತಿತ್ತು. ಇದೀಗ ಗ್ರೇಟರ್ ನೋಯ್ಡಾದಲ್ಲಿ ಮಹಿಳಾ ಸಬಲೀಕರಣದ ವಿಶೇಷ ಕಾರ್ಯಕ್ರಮವನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಸಿಬ್ಬಂದಿ ಆಯೋಜಿಸಿದ್ದರು. ಗುರುವಾರ ನಡೆದ ಈ ಕಾರ್ಯಕ್ರಮಕ್ಕೆ ಸೌಂದರ್ಯ ರಾಣಿ ಸಂಧುವನ್ನು ವಿಶೇಷ ಅತಿಥಿಯನ್ನಾಗಿ ಆಮಂತ್ರಿಸಲಾಗಿತ್ತು.

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಐಟಿಬಿಪಿ ಯ 39ನೇ ಬೆಟಾಲಿಯನ್ ಆಶ್ರಯದಲ್ಲಿ ಹಿಮವೀರ್ ವೈವ್ಸ್ ವೆಲ್ಫೇರ್ ಅಸೋಸಿಯೇಷನ್ ಆಯೋಜಿಸಿದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಭುವನ ಸುಂದರಿಯನ್ನು ಆಹ್ವಾನಿಸಲಾಯಿತು. ಈ ವೇಳೆ ಅವರು ಪೊಲೀಸ್ ಕುಟುಂಬ ಮತ್ತು ಮಕ್ಕಳೊಂದಿಗೆ ಪಂಜಾಬಿ ಹಾಡುಗಳಿಗೆ ಸ್ಟೆಪ್ಸ್ ಹಾಕಿದ್ದಾರೆ. ಹಳದಿ ಬಣ್ಣದ ಸೀರೆಯಲ್ಲಿ ಸುಂದರವಾಗಿ ಕಾಣುತ್ತಿದ್ದ ಸಂಧು, ಗುಂಪಿನಲ್ಲಿ ನೃತ್ಯ ಮಾಡಿದ್ದಾರೆ.

ಈ ವಿಡಿಯೋವನ್ನು ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಹಂಚಿಕೊಂಡಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ದೇಶಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುವ ಐಟಿಬಿಪಿ ಸಿಬ್ಬಂದಿಯನ್ನು ಸಂಧು ಶ್ಲಾಘಿಸಿದ್ದಾರೆ. ಜೊತೆಗೆ ಮಹಿಳಾ ಸಬಲೀಕರಣದ ಪ್ರಯುಕ್ತ ಮಾಡಲಾಗುತ್ತಿರುವ ಪ್ರಗತಿ ಮತ್ತು ಪ್ರಯತ್ನಗಳ ಕುರಿತು ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

1994 ರಲ್ಲಿ ಸುಶ್ಮಿತಾ ಸೇನ್ ಮತ್ತು 2000 ರಲ್ಲಿ ಲಾರಾ ದತ್ತಾ ನಂತರ ಹರ್ನಾಜ್ ಸಂಧು ಮಿಸ್ ಯೂನಿವರ್ಸ್ ಪ್ರಶಸ್ತಿಯನ್ನು ಗೆದ್ದ ಮೂರನೇ ಭಾರತೀಯಳು ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...