ಪೌರಾಡಳಿತ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.
ಪೌರಾಡಳಿತ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 10,600 ಹೊರಗುತ್ತಿಗೆ ನೌಕರರಿಗೆ ನೇರ ವೇತನ ಪಾವತಿ ವ್ಯವಸ್ಥೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಾಗುತ್ತದೆ.
ಶುಕ್ರವಾರದಂದು ಬಿಡದಿಯಲ್ಲಿ ಮಾತನಾಡಿದ ಪೌರಾಡಳಿತ ಸಚಿವ ಎಂಟಿಬಿ ನಾಗರಾಜು ಈ ಮಾಹಿತಿ ನೀಡಿದ್ದಾರೆ.