alex Certify ಪ್ರಕರಣದಿಂದ ಮುಕ್ತರಾಗುತ್ತಲೇ ಪತ್ನಿ – ಪುತ್ರನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಮಾಜಿ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಕರಣದಿಂದ ಮುಕ್ತರಾಗುತ್ತಲೇ ಪತ್ನಿ – ಪುತ್ರನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ ಮಾಜಿ ಸಚಿವ ಈಶ್ವರಪ್ಪ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಮಗೆ ಕ್ಲೀನ್ ಚಿಟ್ ಸಿಕ್ಕ ಬಳಿಕ ಮಾಜಿ ಸಚಿವ ಈಶ್ವರಪ್ಪನವರ ಶಿವಮೊಗ್ಗ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದೆ. ಈ ವೇಳೆ ತಮ್ಮ ಪತ್ನಿ, ಉತ್ತರ ಹಾಗೂ ಕುಟುಂಬ ಸದಸ್ಯರಿಗೆ ಸಿಹಿ ತಿನ್ನಿಸಿ ಈಶ್ವರಪ್ಪ ಸಂಭ್ರಮಿಸಿದ್ದಾರೆ.

ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾಗುತ್ತಿದ್ದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಈಶ್ವರಪ್ಪನವರ ನಿವಾಸಕ್ಕೆ ಆಗಮಿಸಿ ಅಭಿನಂದಿಸಿದ್ದಾರೆ. ಅಲ್ಲದೆ ಮಠಾಧೀಶರು ಕೂಡ ಕರೆ ಮಾಡಿ ಶುಭಾಶಯ ತಿಳಿಸಿದರು ಎಂದು ಹೇಳಲಾಗಿದೆ.

ತಮಗೆ ಕ್ಲೀನ್ ಚಿಟ್ ಸಿಕ್ಕ ಕುರಿತಂತೆ ಮಾತನಾಡಿದ ಈಶ್ವರಪ್ಪ, ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ನನಗೆ ಮೊದಲೇ ಗೊತ್ತಿತ್ತು. ಮನೆ ದೇವರಾದ ತಾಯಿ ಚೌಡೇಶ್ವರಿ ಆಶೀರ್ವಾದದಿಂದ ನಾನು ಆರೋಪ ಮುಕ್ತನಾಗಿದ್ದೇನೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...