alex Certify ಪ್ರಜಾಪ್ರಭುತ್ವದ ಹಬ್ಬಕ್ಕೆ ಸಕಲ ಸಿದ್ದತೆ; ಚುನಾವಣಾ ಪರಿಕರಗಳೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಜಾಪ್ರಭುತ್ವದ ಹಬ್ಬಕ್ಕೆ ಸಕಲ ಸಿದ್ದತೆ; ಚುನಾವಣಾ ಪರಿಕರಗಳೊಂದಿಗೆ ಮತಗಟ್ಟೆಗೆ ತೆರಳಿದ ಸಿಬ್ಬಂದಿ

ಪ್ರಜಾ ಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ರಾಜ್ಯ ವಿಧಾನಸಭೆ ಚುನಾವಣೆ ಮತದಾನ ಮೇ 10 ರ ನಾಳೆ ನಡೆಯಲಿದ್ದು, ಸುಗಮವಾಗಿ ನಡೆಸಲು ಚುನಾವಣಾ ಆಯೋಗ ಸಜ್ಜಾಗಿದೆ. ನಿಗದಿಪಡಿಸಿದ ಮತಗಟ್ಟೆಗಳಿಗೆ ನಿಯೋಜಿತ ಸಿಬ್ಬಂದಿ ಮತಯಂತ್ರ ಸೇರಿದಂತೆ ಚುನಾವಣಾ ಪರಿಕರಗಳೊಂದಿಗೆ ತೆರಳಿದ್ದಾರೆ.

ಕಳೆದ 15 ದಿನಗಳಿಂದ ಮುಗಿಲು ಮುಟ್ಟಿದ್ದ ಪ್ರಚಾರದ ಅಬ್ಬರ ನಿನ್ನೆ ಸಂಜೆ ಅಂತ್ಯವಾಗಿದೆ. ಇಂದು ಮನೆ ಮನೆಗೆ ತೆರಳಿ ಆಯಾ ಪಕ್ಷಗಳ ಕಾರ್ಯಕರ್ತರು ಮತಯಾಚಿಸುತ್ತಿದ್ದಾರೆ. ಇಂದು ಸಂಜೆ 6 ಗಂಟೆಗೆ ಇದು ಅಂತ್ಯವಾಗಲಿದೆ. ಮತದಾರರ ಮನವೊಲಿಸಲು ಕೊನೆಯ ಹಂತದ ತೆರೆಮರೆಯ ಕಸರತ್ತು ನಡೆಯುತ್ತಿದ್ದು, ಇಂದು ರಾತ್ರಿ ಹಣ, ಹೆಂಡದ ಹೊಳೆ ಹರಿಯುವ ಸಂಭವವಿದೆ.

ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡ,   ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಮೊದಲಾದವರು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ.

ಈಗಾಗಲೇ ಮತದಾರರು ಯಾರಿಗೆ ಮತ ಹಾಕಬೇಕೆಂಬುದರ ಬಗ್ಗೆ ತೀರ್ಮಾನ ಕೈಗೊಂಡಿದ್ದು, ನಾಳೆ ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಅಭ್ಯರ್ಥಿಗಳು ಮತ್ತವರ ಬೆಂಬಲಿಗರು ಯಾವ ಭಾಗದಲ್ಲಿ ತಮಗೆ ಕಡಿಮೆ ಮತ ಬರಬಹುದೆಂಬ ಲೆಕ್ಕಾಚಾರ ಹಾಕಿದ್ದು, ಅಂತಹ ಬೂತ್‌ಗಳಲ್ಲಿ ಹೆಚ್ಚಿನ ಒತ್ತು ನೀಡಿ ಮತದಾರರನ್ನು ಓಲೈಸಿದ್ದಾರೆ. ಕೆಲವೆಡೆ ಬೆಟ್ಟಿಂಗ್ ಕೂಡ ನಡೆದಿದೆ ಎನ್ನಲಾಗಿದ್ದು, ಮತಗಟ್ಟೆಗಳಿಗೆ ಬರುವ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಅಶಕ್ತರಿಗೆ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಮೇ 13ರಂದು ಮತ ಎಣಿಕೆ ನಡೆಯಲಿದ್ದು, ಅಂದು ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆಬೀಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...