
ಅರ್ಜುನ್ ಗೌಡ ಸಿನಿಮಾದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇದೀಗ ‘ಅಬ್ಬರ’ ಚಿತ್ರದ ಮೂಲಕ ಮತ್ತೊಮ್ಮೆ ತೆರೆಮೇಲೆ ಮಿಂಚಲಿದ್ದಾರೆ.
ನವೆಂಬರ್ 18ರಂದು ಬಿಡುಗಡೆಯಾಗಲಿರುವ ಈ ಸಿನಿಮಾಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಲಿದೆ.
ಕೆ. ರಾಮ್ ನಾರಾಯಣ್ ನಿರ್ದೇಶನದ ‘ಅಬ್ಬರ’ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಸೇರಿದಂತೆ ರಾಜ್ ಶ್ರೀ ಪೊನ್ನಪ್ಪ, ರವಿಶಂಕರ್, ನಿಮಿಕಾ ರತ್ನಾಕರ್, ಲೇಖಾಚಂದ್ರ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಸಿ&ಎಂ ಮೂವೀಸ್ ಲಾಂಛನದಲ್ಲಿ ಬಸವರಾಜ್ ಮಂಚಯ್ಯ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.