
ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ 35ನೇ ವಸಂತಕ್ಕೆ ಕಾಲಿಟ್ಟಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ. ಪ್ರಜ್ವಲ್ ದೇವರಾಜ್ ಹುಟ್ಟು ಹಬ್ಬದ ಪ್ರಯುಕ್ತ ‘ಅಬ್ಬರ’ ಚಿತ್ರತಂಡ ವಿಡಿಯೋ ಹಾಡೊಂದನ್ನು ಬಿಡುಗಡೆ ಮಾಡಲು ಫ್ಲಾನ್ ಮಾಡಿದೆ.
‘ತಲೆ ಕೆಟ್ಟಾಗ’ ಎಂಬ ಈ ಹಾಡಿಗೆ ವಿಜಯಪ್ರಕಾಶ್ ಧ್ವನಿಗೂಡಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ, ಹಾಗೂ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಕೆ ರಾಮ್ ನಾರಾಯಣ್ ನಿರ್ದೇಶನದ ಈ ಚಿತ್ರವನ್ನು ಸಿ ಆ್ಯಂಡ್ ಎಮ್ ಮೂವೀಸ್ ಬ್ಯಾನರ್ ನಡಿ ಬಸವರಾಜ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಟೈಟಲ್ ಮೂಲಕವೇ ಈ ಸಿನಿಮಾ ಸಾಕಷ್ಟು ಸದ್ದು ಮಾಡಿದ್ದು, ಪ್ರಜ್ವಲ್ ದೇವರಾಜ್ ರಗಡ್ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
