alex Certify ಪ್ರತಿದಿನ ಖಾಲಿಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿದ್ರೆ ಬೇಗನೆ ಇಳಿಸಬಹುದು ತೂಕ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಖಾಲಿಹೊಟ್ಟೆಯಲ್ಲಿ ಇದನ್ನು ಸೇವನೆ ಮಾಡಿದ್ರೆ ಬೇಗನೆ ಇಳಿಸಬಹುದು ತೂಕ..!

ಜೇನುತುಪ್ಪ ಸರ್ವರೋಗಕ್ಕೂ ಮದ್ದಿದ್ದಂತೆ. ಜೇನುತುಪ್ಪ ಸೇವನೆಯಿಂದ ಆರೋಗ್ಯಕ್ಕೆ ಅನೇಕ ಬಗೆಯ ಪ್ರಯೋಜನಗಳಿವೆ. ಜೇನುತುಪ್ಪದಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕಾರ್ಬೋಹೈಡ್ರೇಟ್ಗಳು, ಅಮೈನೋ ಆಮ್ಲಗಳು ಸಮೃದ್ಧವಾಗಿವೆ. ಪೌಷ್ಟಿಕಾಂಶ ಇದರಲ್ಲಿ ಹೇರಳವಾಗಿದೆ. ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪವನ್ನು ಸೇವಿಸುವುದು ನಿಮಗೆ ಹೆಚ್ಚು ಪ್ರಯೋಜನಕಾರಿ.

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಜೇನುತುಪ್ಪವನ್ನು ಸೇವಿಸಿದರೆ ತೂಕವನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು. ಇದರಿಂದ ಶೀತ, ಕಫದ ಸಮಸ್ಯೆ ಸಹ ನಿವಾರಣೆಯಾಗುತ್ತದೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಜೇನುತುಪ್ಪ ಸಹಾಯ ಮಾಡುತ್ತದೆ. ಉಗುರು ಬೆಚ್ಚಗಿನ ನೀರಿಗೆ ಜೇನುತುಪ್ಪ ಹಾಕಿಕಂಡು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದಿನವಿಡೀ ನಿಮ್ಮ ಒತ್ತಡವೂ ಕಡಿಮೆಯಾಗುತ್ತದೆ.

ತೂಕ ಇಳಿಸಲು ಜೇನುತುಪ್ಪ ಬಳಕೆ…

ಎಲ್ಲರೂ ಫಿಟ್ ಆಗಿರಬೇಕೆಂದು ಬಯಸುತ್ತಾರೆ. ಆದ್ರೆ ಜಿಮ್‌ ಹಾಗೂ ವ್ಯಾಯಾಮವನ್ನ ಎಲ್ಲರೂ ಮಾಡಲು ಸಾಧ್ಯವಿಲ್ಲ. ಹಾಗಾಗಿ ಕೆಲವೊಂದು ಮನೆಮದ್ದುಗಳ ಸಹಾಯದಿಂದ ತೂಕ ಇಳಿಸಲು ಪ್ರಯತ್ನಿಸಬೇಕು. ಬೆಳಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರಿಗೆ ಜೇನುತುಪ್ಪ ಬೆರೆಸಿ ಸೇವಿಸುವುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬು ಕಡಿಮೆಯಾಗುತ್ತದೆ. ನೀವು ಅದಕ್ಕೆ ನಿಂಬೆ ರಸ ಅಥವಾ ಜೀರಿಗೆ ಪುಡಿಯನ್ನು ಸಹ ಸೇರಿಸಬಹುದು.

ಕೆಮ್ಮಿನ ಸಮಸ್ಯೆಗೆ ಪರಿಹಾರ… ಗಂಟಲು ನೋವು, ಕೆಮ್ಮಿನ ಸಮಸ್ಯೆ ಇದ್ದರೆ ಜೇನುತುಪ್ಪವನ್ನು ನೆಕ್ಕಬೇಕು. ಅದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣವು ಕಫವನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ಕೆಮ್ಮನ್ನು ಸಹ ಕಡಿಮೆ ಮಾಡುತ್ತದೆ. ಬೆಚ್ಚಗಿನ ನೀರಿಗೆ ಜೇನುತುಪ್ಪ ಹಾಕಿಕೊಂಡು ಕುಡಿದರೂ ಶೀತ ಕಡಿಮೆಯಾಗುತ್ತದೆ.

ಗಂಟಲು ಕೆರೆತ…

ಗಂಟಲು ನೋವು, ಕೆರೆತ ಸಾಮಾನ್ಯ ಸಮಸ್ಯೆ. ಮಳೆಗಾಲದಲ್ಲಂತೂ ಸಾಕಷ್ಟು ಮಂದಿ ಇದರಿಂದ ತೊಂದರೆ ಅನುಭವಿಸುತ್ತಾರೆ. ಶುಂಠಿ ಪುಡಿಗೆ ಸ್ವಲ್ಪ ಜೇನುತುಪ್ಪ ಬೆರೆಸಿಕೊಂಡು ಅದನ್ನು ತಿನ್ನುವುದರಿಂದ ಗಂಟಲು ನೋವು ಕಡಿಮೆಯಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...