alex Certify ಪ್ರತಿದಿನ ಪಿಸ್ತಾ ತಿನ್ನಿರಿ, ಇದರಿಂದ ಆರೋಗ್ಯಕ್ಕಿದೆ ಹತ್ತಾರು ಲಾಭ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರತಿದಿನ ಪಿಸ್ತಾ ತಿನ್ನಿರಿ, ಇದರಿಂದ ಆರೋಗ್ಯಕ್ಕಿದೆ ಹತ್ತಾರು ಲಾಭ…!

 

ಪಿಸ್ತಾ ಅತ್ಯುತ್ತಮ ಡ್ರೈಫ್ರೂಟ್‌ಗಳಲ್ಲೊಂದು. ಬಹುತೇಕ ಎಲ್ಲರಿಗೂ ಇದು ಇಷ್ಟವಾಗುತ್ತದೆ. ಅನೇಕ ರೀತಿಯ ಸಿಹಿತಿಂಡಿಗಳನ್ನು ಗಾರ್ನಿಶ್‌ ಮಾಡಲು ಪಿಸ್ತಾ ಬಳಸಲಾಗುತ್ತದೆ. ಇದು ಉಷ್ಠ ಸ್ವಭಾವ ಹೊಂದಿದೆ. ಆದ್ದರಿಂದ ಚಳಿಗಾಲದಲ್ಲಿ ಇದನ್ನು ತಿನ್ನಲು ವಿಶೇಷವಾಗಿ ಸಲಹೆ ನೀಡಲಾಗುತ್ತದೆ. ತಜ್ಞರ ಪ್ರಕಾರ ಪ್ರತಿದಿನ ಪಿಸ್ತಾವನ್ನು ತಿನ್ನಬೇಕು.

ಪಿಸ್ತಾದ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಫೀನಾಲಿಕ್ ಸಂಯುಕ್ತಗಳು, ಕ್ಯಾರೊಟಿನಾಯ್ಡ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳು ಇದರಲ್ಲಿ ಕಂಡುಬರುತ್ತವೆ. ಹಾಗಾಗಿ ಪಿಸ್ತಾ ಮಧುಮೇಹ ರೋಗಿಗಳಿಗೆ ಪರಿಪೂರ್ಣ ಆಹಾರವಾಗಿದೆ.

ಪಿಸ್ತಾಗಳು ಜಿಯಾಕ್ಸಾಂಥಿನ್ ಮತ್ತು ಲುಟೀನ್‌ಗಳಲ್ಲಿ ಸಮೃದ್ಧವಾಗಿವೆ.  ಇದು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್‌ನಿಂದ ಕಣ್ಣುಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಇದು ದೃಷ್ಟಿಯನ್ನು ಸುಧಾರಿಸುತ್ತದೆ ಮತ್ತು ಮೊಬೈಲ್, ಲ್ಯಾಪ್‌ಟಾಪ್‌ಗಳ ನೀಲಿ ಬೆಳಕಿನಿಂದ ಕಣ್ಣುಗಳನ್ನು ರಕ್ಷಿಸುತ್ತದೆ.

ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಪಿಸ್ತಾ ಉತ್ತಮವಾದ ಆಹಾರದ ಆಯ್ಕೆಯಾಗಿದೆ. ಇದರಲ್ಲಿ ಆರೋಗ್ಯಕರ ಕ್ಯಾಲೊರಿಗಳಿವೆ. ಸೀಮಿತ ಪ್ರಮಾಣದಲ್ಲಿ ಸೇವಿಸಿದರೆ ತೂಕವನ್ನು ಕಡಿಮೆ ಮಾಡಲು ಇದು ಸಹಾಯಕವಾಗಿದೆ.

ಪಿಸ್ತಾ, ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುವ ಫೈಬರ್ ಅನ್ನು ಹೇರಳವಾಗಿ ಹೊಂದಿರುತ್ತದೆ. ಇದನ್ನು ತಿಂದರೆ ಮಲಬದ್ಧತೆ, ಗ್ಯಾಸ್, ಅಜೀರ್ಣದಂತಹ ಸಮಸ್ಯೆಗಳು ಎದುರಾಗುವುದಿಲ್ಲ.

ಪಿಸ್ತಾವನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತನಾಳಗಳಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಇದು ರಕ್ತದೊತ್ತಡವನ್ನು ಸುಲಭವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಹೀಗಾಗಿ ಹೃದಯಾಘಾತದಂತಹ ಕಾಯಿಲೆಗಳ ಅಪಾಯವೂ ಇರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...